!! ಓಂ ಶ್ರೀ ನಾರಾಯಣ ಪರಮ ಗುರವೇ ನಮಃ !!
*ಕರ್ನಾಟಕದ ಮುಖ್ಯ ಮಂತ್ರಿಗಳಿಗೆ ಸಮರ್ಪಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ 3 ಅಡಿ ಎತ್ತರದ ಕಂಚಿನ ಪ್ರತಿಮೆ.*
ರಾಜ್ಯದ ಈಡಿಗರು, ಬಿಲ್ಲವರು, ನಾಮಧಾರಿ ಸಮಾಜದ ಮುಖಂಡರೊಂದಿಗೆ ಇಂದು ಮುಖ್ಯಮಂತ್ರಿಯವರ ಗೃಹ ಕಛೇರಿ ಕೃಷ್ಣದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪನವರಿಗೆ ಬ್ರಹ್ಮರ್ಷಿ ನಾರಾಯಣಗುರುಗಳ ಪ್ರತಿಮೆ ಸಮರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳನ್ನು ಹಾಗೂ ಕನ್ನಡ ಸಂಸ್ಕೃತಿ ಸಚಿವ ಶ್ರೀ ಸಿಟಿ ರವಿ ಅವರನ್ನು ಭೇಟಿ ಮಾಡಿ, ಸಮಾಜದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಮಾಜದ ಮುಖಂಡರ ಬೇಡಿಕೆಗಳನ್ನು ಆಲಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು, ಮುಂದಿನ ದಿನಗಳಲ್ಲಿ ಸಮಾಜದ ಬೇಡಿಕೆ ಈಡೇರಿಕೆಗೆ ಸಹಮತ ವ್ಯಕ್ತಪಡಿಸಿದರು.
ನಿಯೋಗದಲ್ಲಿ ರಾಜ್ಯ ಈಡಿಗ ಸಂಘದ ಅಧ್ಯಕ್ಷ ಶ್ರೀ ತಿಮ್ಮೇಗೌಡ, ಶ್ರೀ ಜೆ.ಪಿ ಸುಧಾಕರ್, ಶ್ರೀ ವೇದಕುಮಾರ್, ಶ್ರೀ ಬಿ.ಎನ್ ಶಂಕರ ಪೂಜಾರಿ, ಲೋಕಸೇವಾ ಆಯೋಗದ ಸದಸ್ಯರಾದ ಡಾ. ಲಕ್ಷ್ಮೀನರಸಯ್ಯ ಮುಂತಾದ ಮುಖಂಡರು ಉಪಸ್ಥಿತರಿದ್ದರು.
ಶ್ರೀ ನಾರಾಯಣ ಗುರುಗಳ ಸುಂದರ ಪ್ರತಿಮೆಯ ನಿರ್ಮಾಣ ಜೆ.ಪಿ. ಆಚಾರ್ಯ ಕೋಟೆಕಾರ್.
No comments:
Post a Comment