ಮಂಗಳೂರು: ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯ ನಿಯೋಗವು ಇಂದು ಬೆಂಗಳೂರಿನಲ್ಲಿ ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದರು. ಮಾನ್ಯ ಮುಖ್ಯಮಂತ್ರಿಗಳು ಸಖರಾತ್ಮಕವಾಗಿ ಸ್ಪಂದಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭರವಸೆ ನೀಡಿದರು.
ಈ ನಿಯೋಗದಲ್ಲಿ ಮಾನ್ಯ ದ.ಕ ಉಸ್ತುವಾರಿ ಸಚಿವರು ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಗೆಜ್ಜೆಗಿರಿ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಯಶವಂತ ದೇರಾಜೆ ಗುತ್ತು, ಕಾರ್ಯದರ್ಶಿ ನಿತೀಶ್ ಕುಮಾರ್ ಶಾಂತಿವನ, ಗಲ್ಫ್ ರಾಷ್ಟ್ರಗಳ ಪ್ರಧಾನ ಸಂಚಾಲಕ ಪ್ರಶಾಂತ್ ಪೂಜಾರಿ ಮಸ್ಕತ್, ಹೊರೆಕಾಣಿಕೆ ಸಮಿತಿಯ ಸಂಚಾಲಕ ಮಂಜುನಾಥ್ ಸಾಲ್ಯಾನ್, ದೀಪಕ್ ಸಜಿಪ ಉಪಸ್ಥಿತರಿದ್ಧರು.